Wednesday, January 30, 2008

ಈಗೀಗ ರಾತ್ರಿಗಳಲ್ಲಿ

ಈಗೀಗ ರಾತ್ರಿಗಳಲ್ಲಿ
ಅವನು ಸೂತ್ರಗಳನ್ನು
ಸಡಿಲಗೊಳಿಸುತ್ತಿರಬೇಕು
ಆಕಾಶಕ್ಕೆ ಅಂಟಿಕೊಂಡ ಚುಕ್ಕಿಗಳೆಲ್ಲ
ಧಪ್ ಎಂದು ಮನೆಯಂಗಳದಲ್ಲಿ
ಬೀಳುತ್ತಿವೆ ; ಪಂಜುಗಳಾಗುತ್ತಿವೆ.
ಸ್ವಲ್ಪ ಮಿಸುಕಾಡಿದರೂ ಸಾಕು
ನಾನು ಹೊತ್ತಿಕೊಳ್ಳುತ್ತೇನೆ.
ಜೊತೆಗೆ ನನ್ನ ಗುಡಿಸಲು,
ಸುತ್ತಲಿನ ಕಪ್ಪು ಭೂಮಿ.
ಸಂಜೆಗಳಲ್ಲಿ ಮೂಲೆ ಸೇರಿಬಿಡುತ್ತೇನೆ,
ಏಳುವುದೇ ಇಲ್ಲ.
ಚುಕ್ಕಿಗಳು ಬೀಳುತ್ತಲೇ ಇವೆ.
ನನಗೆ ತಲೆಭಾರ.
ಈಗೀಗ ರಾತ್ರಿಗಳಲ್ಲಿ
ನಾನು ಅರೆ ಹುಚ್ಚಿ.